News Karnataka Kannada
Saturday, April 13 2024
Cricket
ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ 3 ಉಗ್ರರ ಹತ್ಯೆ

Untitled 63
Photo Credit :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಪಹು ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಆರಂಭಗೊಂಡ ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

ಇಂದು ಮಧ್ಯಾಹ್ನ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.
ಇತರರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರು ಅಡಗಿರುವ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿವೆ. ಎರಡೂ ಕಡೆಯಿಂದ ಗುಂಡಿನ ಚಕಮಕಿ ಮುಂದುವರಿದಿದೆ. ಭದ್ರತಾ ಪಡೆಗಳು ಜಾಗರೂಕತೆಯಿಂದ ಉಗ್ರರಿಗೆ ತಕ್ಕ ಪ್ರತ್ಯುತ್ತರ ನೀಡುತ್ತಿವೆ. ಪುಲ್ವಾಮಾದಲ್ಲಿ ಮೂವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಅಡಗಿರುವ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಅವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು