News Karnataka Kannada
Saturday, April 20 2024
Cricket
ಜಮ್ಮು-ಕಾಶ್ಮೀರ

 ಬೀದಿನಾಯಿಗಳ ಹಾವಳಿ : 17 ಪ್ರವಾಸಿಗರು ಸೇರಿ 39 ಮಂದಿಗೆ ಗಾಯ

Untitled 209
Photo Credit :

ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರ ನಗರದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದೆ. ಹಿಂಡು ಹಿಂಡು ಬೀದಿನಾಯಿಗಳು ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ಬೀದಿ ನಾಯಿಗಳ ದಾಳಿಯಲ್ಲಿ 17 ಪ್ರವಾಸಿಗರು ಸೇರಿದಂತೆ 39 ಜನರು ಗಾಯಗೊಂಡಿದ್ದಾರೆ.

ನಿನ್ನೆ ಸಂಜೆ ಶ್ರೀನಗರದ ದಾಲ್ಗೇಟ್ ಪ್ರದೇಶದಲ್ಲಿ ಬೀದಿ ನಾಯಿಗಳ ಹಿಂಡು ದಾಳಿ ಮಾಡಿದ್ದು, ದಾಳಿಯಲ್ಲಿ 39 ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳಲ್ಲಿ 17 ಪ್ರವಾಸಿಗರು, 22 ಸ್ಥಳೀಯರು ಸೇರಿದ್ದಾರೆ. ಎಲ್ಲ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಶ್ರೀನಗರದ ಎಸ್‌ಎಂಎಚ್‌ಎಸ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಕವಾಲ್‌ಜೀತ್ ಸಿಂಗ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, 39 ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ದಾಲ್ ಸರೋವರದ ದಂಡೆಯಲ್ಲಿರುವ ಡಾಲ್ಗೇಟ್ ಪ್ರದೇಶ ಶ್ರೀನಗರ ನಗರದ ಪ್ರವಾಸಿ ಚಟುವಟಿಕೆಯ ಕೇಂದ್ರ ಬಿಂದು. ಶ್ರೀನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ವಿರುದ್ಧ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಬೀದಿನಾಯಿಗಳ ಹಾವಳಿ : 17 ಪ್ರವಾಸಿಗರು ಸೇರಿ 39 ಮಂದಿಗೆ ಗಾಯ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು