News Karnataka Kannada
Wednesday, April 24 2024
Cricket
ಜಮ್ಮು-ಕಾಶ್ಮೀರ

ಸೊಪೋರ್‌ನಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ; 3 ಎಲ್‌ಇಟಿ ಉಗ್ರರ ಬಂಧನ

Military
Photo Credit : IANS

ಬಾರಾಮುಲ್ಲಾ : ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನ ಹೈಗಾಮ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ.

ಇತ್ತೀಚಿಗೆ ಸ್ಥಳೀಯರಲ್ಲದ ಜನರ ಹತ್ಯೆಗಳು ಮತ್ತು ವಿವಿಧೆಡೆ ನಡೆದ ಗ್ರೆನೇಡ್ ದಾಳಿಗಳ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಇದರಂತೆ ವಿವಿಧ ಸ್ಥಳಗಳಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ಮೂವರು ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಸತತ ವಿಚಾರಣೆಯ ನಂತರ ಈ ಮೂವರು ಉಗ್ರರು ಲಷ್ಕರ್-ಎ-ತೊಯ್ಬಾದ ಸಂಘಟನೆಗೆ ಸೇರಿದವರು ಎಂದು ತಿಳಿದುಬಂದಿದೆ. ಬಂಧಿತರಿಂದ ಮೂರು ಚೀನಾ ನಿರ್ಮಿತ ಪಿಸ್ತೂಲ್‌ಗಳು, ಮದ್ದುಗುಂಡುಗಳು ಹಾಗೂ ಇತರ ಅಪರಾಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು