ಶ್ರೀನಗರ: ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ಅವಂತಿಪೋರಾದ ತ್ರಾಲ್ ಎಂಬಲ್ಲಿ ಉಗ್ರರು ಅಗಡಿ ಕುಳಿತಿರುವ ಖಚಿತ ಮಾಹಿತಿಗಳು ತಿಳಿದುಬಂದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿತ್ತು.
ಈ ವೇಳೆ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾಪಡೆಗಳು ಉಗ್ರರ ಗುಂಡಿನ ದಾಳಿಗೆ ದಿಟ್ಟ ಉತ್ತರ ನೀಡಿದ್ದಾರೆ.
ಇದರಂತೆ ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಕಾರ್ಯಾಚಱಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.