News Karnataka Kannada
Monday, May 06 2024
ಜಮ್ಮು-ಕಾಶ್ಮೀರ

ಅವಂತಿಪೋರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ

Terrorists open fire on army vehicle
Photo Credit : IANS

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ರಾಜ್‌ಪೋರಾ ಪ್ರದೇಶದಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಎರಡು ಎಕೆ-47 ರೈಫಲ್‌ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯಾದ ಉಗ್ರರನ್ನು ಟ್ರಾಲ್‌ ನ ಶಾಹಿದ್ ರಾಥರ್ ಮತ್ತು ಶೋಪಿಯಾನ್‌ ನ ಉಮರ್ ಯೂಸುಫ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಅವಂತಿಪೋರಾ ಎನ್‌ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟರು. ಎರಡು ಎಕೆ 47 ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಹುಡುಕಾಟ ನಡೆಯುತ್ತಿದೆ” ಎಂದು ಕಾಶ್ಮೀರ ವಲಯ ಪೊಲೀಸರು ಸೋಮವಾರ ಟ್ವೀಟ್ ಮಾಡಿದ್ದಾರೆ.

‘ಇತರ ಭಯೋತ್ಪಾದಕ ಅಪರಾಧಗಳ ಜೊತೆಗೆ, ಉಗ್ರ ಶಾಹಿದ್ ಅರಿಪಾಲ್‌ ನ ಶಕೀಲಾ ಮತ್ತು ಲುರ್ಗಾಮ್ ಟ್ರಾಲ್‌ನ ಸರ್ಕಾರಿ ಉದ್ಯೋಗಿ ಜಾವಿದ್ ಅಹ್ಮದ್‌ನನ್ನು ಕೊಂದಿದ್ದಾನೆ’ ಎಂದು ಕಾಶ್ಮೀರ ಐಜಿಪಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು