ಜಮ್ಮು-ಕಾಶ್ಮೀರ : ಜಮ್ಮು-ಕಾಶ್ಮೀರದ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಭಾರತೀಯ ತಾಂತ್ರಿಕ ಸಂಸ್ಥೆಯ ನೂತನ ಕ್ಯಾಂಪಸ್ ನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಜೀತೇಂದ್ರ ಸಿಂಗ್, ಧರ್ಮೇಂದ್ರ ಪ್ರಧಾನ್ ಹಾಗೂ ಜಮ್ಮು-ಕಾಶ್ಮೀರದ ಉಪ ರಾಜ್ಯಪಾಲ ಮನೋಜ್ ಸಿನ್ಹಾ ಮತ್ತಿತರರು ಉಪಸ್ಥಿತರಿದ್ದರು.
ಸುಮಾರು 210 ಕೋಟಿ ರೂ. ವೆಚ್ಚದಲ್ಲಿ ನೂತನ ಜಮ್ಮು ಐಐಟಿ ಕ್ಯಾಂಪಸ್ ನ್ನು ನಿರ್ಮಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಜೊತೆಗೆ ಹಾಸ್ಟೆಲ್, ಜಿಮ್ನಾಸಿಮ್, ಒಳಾಂಗಣ ಕ್ರೀಡೆಗಳು ಮತ್ತಿತರ ಸೌಲಭ್ಯಗಳನ್ನು ಒದಗಿಸಲಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದರ ಹೊರತಾಗಿ ಅಮಿತ್ ಶಾ ಸಾರ್ವಜನಿಕ ಸಭೆಯಲ್ಲೂ ಭಾಷಣ ಮಾಡಿದರು. ಜಮ್ಮು-ಕಾಶ್ಮೀರದ ಸುರಕ್ಷತೆ ಸನ್ನಿವೇಶಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೂ ಸಮಾಲೋಚನೆ ನಡೆಸಿದರು.
शिक्षा किसी भी समाज व क्षेत्र की समृद्धि व विकास का मूल आधार है।
इसी दिशा में आज जम्मू में IIT के नए कैंपस का उद्घाटन किया। @narendramodi जी के प्रधानमंत्री बनने के बाद J&K के युवाओं की शिक्षा हमारी सर्वोच्च प्राथमिकता रही है, IIT का ये नया कैंपस हमारे इसी संकल्प को दर्शाता है। pic.twitter.com/pWSlI1343O
— Amit Shah (Modi Ka Parivar) (@AmitShah) October 24, 2021
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಪಡಿಸಿ ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ನಂತರ ಇದೇ ಮೊದಲ ಬಾರಿಗೆ ಅಮಿತ್ ಶಾ ಮೂರು ದಿನಗಳ ಕಾಲ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.