ಜಮ್ಮು-ಕಾಶ್ಮೀರ

ಈ ಬಾರಿ ಕಾಶ್ಮೀರದಲ್ಲಿ ಮಿಸ್ ವರ್ಲ್ಡ್ ಸ್ಪರ್ಧೆ

ಜಮ್ಮು ಕಾಶ್ಮೀರ:  71ನೇ ಆವೃತ್ತಿಯ ಮಿಸ್ ವರ್ಲ್ಡ್ 2023 ಸ್ಪರ್ಧೆಯು ಈ ಬಾರಿ ಕಾಶ್ಮೀರದಲ್ಲಿ ನಡೆಯಲಿದೆ ಎಂದು ಮಿಸ್ ವರ್ಲ್ಡ್ ಸಂಸ್ಥೆಯ ಮುಖ್ಯಸ್ಥೆ ಮತ್ತು ಸಿಇಒ ಜುಲಿಯಾ ಎರಿಕ್‌ ಮೊರ್ಲೆ ತಿಳಿಸಿದ್ದಾರೆ.

ವಿಶ್ವ ಸುಂದರಿ ಸಂಸ್ಥೆಯ ಸಿಬ್ಬಂದಿ ನವೆಂಬರ್‌ನಲ್ಲಿ ಕಾಶ್ಮೀರಕ್ಕೆ ಆಗಮಿಸಲಿದ್ದಾರೆ. ಡಿಸೆಂಬರ್‌ 9 ರಂದು ಕಾರ್ಯಕ್ರಮ ನಡೆಯಲಿದೆ. ಈ ಸ್ಪರ್ಧೆಯಲ್ಲಿ 140 ದೇಶಗಳಿಂದ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಮೊರ್ಲೆ ಮಾಹಿತಿ ನೀಡಿದ್ದಾರೆ.

ಕಾಶ್ಮೀರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಶ್ಮೀರದ ಜನರು ಸುಂದರವಾದ ಮನಸ್ಸನ್ನು ಹೊಂದಿದ್ದೀರಿ, ನಿಜವಾಗಿಯೂ ತುಂಬ ಖುಷಿಯಾಗುತ್ತಿದೆ. ನವೆಂಬರ್‌ ಬರುವುದನ್ನು ನಾವು ಎದುರು ನೋಡುತ್ತಿದ್ದೇವೆ’ ಎಂದು ಮೊರ್ಲೆ ಹೇಳಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಈ ಹಿಂದಿನ ವಿಶ್ವಸುಂದರಿ ಸ್ಪರ್ಧೆಯ ವಿಜೇತರಾದ ಕೆರೊಲಿನಾ ಬೈಲಾವ್ಸ್ಕಾ, ಭಾರತದ ಸಿನಿ ಶೆಟ್ಟಿ, ಕೆರಿಬಿಯನ್‌ ಎಮ್ಮಿ ಪೆನಾ ಪಾಲ್ಗೊಂಡಿದ್ದರು

Ashitha S

Recent Posts

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

15 mins ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

29 mins ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

42 mins ago

ಕೆ.ಎಲ್​ ರಾಹುಲ್​ ಬಳಿ ಕ್ಷಮೆ ಕೇಳಿದ ಲಕ್ನೋ ತಂಡದ ಮಾಲೀಕ ಸಂಜೀವ್ ಗೋಯೆಂಕಾ

ಕೆಲವು ದಿನಗಳ ಹಿಂದೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಸನ್​ರೈಸರ್ಸ್​​ ಹೈದರಾಬಾದ್​​​ ವಿರುದ್ಧ ಲಕ್ನೋ ಸೂಪರ್​…

1 hour ago

ನ್ಯಾಯಾಧೀಶರುಗಳು ವರ್ಗಾವಣೆ : ವಕೀಲರ ಸಂಘ ಬೀಳ್ಕೊಡುಗೆ

ಜಿಲ್ಲಾ ನ್ಯಾಯಾಲಯದಲ್ಲಿ ಸತತ ಮೂರು ವರ್ಷ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ನ್ಯಾಯಾಧೀಶರುಗಳಾದ ಶಾಂತಣ್ಣ ಮುತ್ತಪ್ಪ ಆಳ್ವ, ಆರ್.ಪಿ.ನಂದೀಶ್, ಎ.ಎಸ್. ಸೋಮ, ಎ.ಕಾಜಲ್…

2 hours ago

ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್: ವ್ಯಕ್ತಿ ಕಂಗಾಲು

ಬೆಂಗಳೂರಿನ ಜೆಬಿ ಕಾವಲ್‌ನಲ್ಲಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್ ಬಂದ ಘಟನೆ ನಡೆದಿದೆ.

2 hours ago