ಜಮ್ಮುಕಾಶ್ಮೀರ: ಜಮ್ಮುಕಾಶ್ಮೀರದ ಪೂಂಚ್ ಜಿಲ್ಲಾಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿಯ ಹಳ್ಳಿಯೊಂದರಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರ ಅಡಗುತಾಣವನ್ನು ಭೇದಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ನೂರಕೋಟೆ ಗ್ರಾಮದಲ್ಲಿ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಅಡಗುತಾಣ ಪತ್ತೆಯಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ.
ಅಲ್ಲಿ ಅಪಾರ ಮದ್ದುಗುಂಡುಗಳು ಎರಡು ಎಕೆ-47 ರೈಫಲ್, ಚೈನೀಸ್ ಪಿಸ್ತೂಲ್ ಗನ್ ಗುಂಡುಗಳ ಕಾಟ್ರೇಜ್ ವಶಪಡಿಸಿಕೊಳ್ಳಲಾಗಿದೆ .
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆದಿದ್ದು ಯಾರನ್ನೂ ಬಂಧಿಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.