ಕಾಶ್ಮೀರದಲ್ಲಿ ಮುಂದುವರಿದ ನಾಗರಿಕರ ಹತ್ಯೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಮುಂದುವರೆದಿದ್ದು, ಕುಲ್ಗಾಂ ಜಿಲ್ಲೆಯಲ್ಲಿ ಭಾನುವಾರ ಉಗ್ರರು ಮತ್ತೆ ಇಬ್ಬರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು, ಮತ್ತೊಬ್ಬರನ್ನು ಗಾಯಗೊಳಿಸಿದ್ದಾರೆ.

“ಕುಲ್ಗಾಂನ ವಾನ್ಪೋಹ್ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ಭಯೋತ್ಪಾದಕರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಹೊರ ರಾಜ್ಯದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ” ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಉಗ್ರರಿಗಾಗಿ ಪೊಲೀಸರು ಮತ್ತು ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದಿವೆ ಎಂದು ಅವರು ಹೇಳಿದ್ದಾರೆ. ಅಧಿಕಾರಿಗಳ ಪ್ರಕಾರ, ಬಾಡಿಗೆ ಮನೆಯಲ್ಲಿದ್ದ ಕಾರ್ಮಿಕರ ಮೇಲೆ ಉಗ್ರರು ಮನಬಂದಂತೆ ಗುಂಡು ಹಾರಿಸಿದರು. ಕಳೆದ 24 ಗಂಟೆಗಳಲ್ಲಿ ವಲಸೆ ಕಾರ್ಮಿಕರ ಮೇಲೆ ನಡೆದ ಮೂರನೇ ದಾಳಿ ಇದಾಗಿದೆ. ನಿನ್ನೆ ಬಿಹಾರದ ಬೀದಿ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಬಡಗಿಯನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದರು.

Gayathri SG

Recent Posts

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

11 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

33 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

38 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

57 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

58 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

1 hour ago