ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿ ಒರ್ವ ನಾಗರಿಕನ ಹತ್ಯೆ

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರು ಒರ್ವ ನಾಗರಿಕನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ಕೇಂದ್ರ ಸರ್ಕಾರದ ಪ್ರೋತ್ಸಾಹ ಮತ್ತು ಸುಧಾರಣಾ ನೀತಿಗಳಿಂದಾಗಿ ಮತ್ತೆ ಕಾಶ್ಮೀರದತ್ತ ಪಂಡಿತರು ಹಾಗೂ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದರಿಂದ ಹತಾಶರಾಗಿರುವ ಉಗ್ರರು ವಲಸಿಗರನ್ನು ಗುರಿಯಾಗಿಯಾಗಿಸಿಕೊಂಡು ದಾಳಿ ನಡೆಸುವ ಮೂಲಕ ಅವರು ಕಾಶ್ಮೀರಕ್ಕೆ ಮರಳದಂತೆ ಭೀತಿಗೊಳಿಸಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಕಕ್ರಾನ್ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ರಜಪೂತ ಸಮುದಾಯಕ್ಕೆ ಸೇರಿದ ಸತೀಶ್ ಕುಮಾರ್ ಸಿಂಗ್ ಎಂಬ 55 ವರ್ಷದ ಚಾಲಕನನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಅವರ ಮನೆಯ ಆವರಣಕ್ಕೆ ನುಗ್ಗಿದ ಉಗ್ರರು ತಲೆ ಮತ್ತು ಎದೆಗೆ ಗುಂಡುಗಳನ್ನು ಹಾರಿಸಿ ಹತ್ಯೆ ಮಾಡಿದ್ದಾರೆ.

ಈ ದಾಳಿಯಲ್ಲಿ ಲಷ್ಕರ್-ಎ-ತೊಯ್ಬಾ ಸಂಘಟನೆಗೆ ಹೊಸದಾಗಿ ಸೇರ್ಪಡೆಯಾದವರ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಬುಧವಾರ ಸತೀಶ್ ಅವರ ಮನೆಯ ಬಳಿ ನಿಯೋಜನೆಗೊಂಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಗುಂಡಿನ ಸದ್ದು ಕೇಳಿ ಅತ್ತ ಹೋಗುವಷ್ಟರಲ್ಲಿ ಸತೀಶ್ ಕುಮಾರ್ ಸಿಂಗ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಕ್ಷಣವೇ ಅವರನ್ನು ಶ್ರೀನಗರ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು.

ಕುಲ್ಗಾಮ್ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ವಲಸೆ ಹೋಗದ ರಜಪೂತ ಕುಟುಂಬಗಳನ್ನು ಸಹ ಉಗ್ರರು ಗುರಿಯಾಗಿಸಿಕೊಂಡಿದ್ದಾರೆ. ಇಲ್ಲಿನ ರಜಪೂತ ಕುಟುಂಬದವರು ಮುಖ್ಯವಾಗಿ ಸೇಬು ವ್ಯಾಪಾರದಲ್ಲಿದ್ದಾರೆ. ಅವರ ಉದ್ಯಮದ ಮೇಲೆ ಉಗ್ರರ ಕಣ್ಣಿದೆ. ಕಾಶ್ಮೀರಿ ಪಂಡಿತರು ಗ್ರಾಮಗಳನ್ನು ತೊರೆಯುವಂತೆ ‘ಲಷ್ಕರ್-ಎ-ಇಸ್ಲಾಮಿ’ ಹೆಸರಿನ ಸಂಘಟನೆಯು ಬೆದರಿಕೆ ಪತ್ರ ವನ್ನು ಹಂಚುವ ಮೂಲಕ ಬೆದರಿಸಲು ಯತ್ನಿಸುತ್ತಿದೆ. ಕಳೆದ 10 ದಿನಗಳಿಂದ ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕರು ನಾಗರಿಕರ ಮೇಲೆ ದಾಳಿಗಳನ್ನು ಹೆಚ್ಚಿಸಿದ್ದಾರೆ.

ದಾಳಿ ನಡೆದ ತಕ್ಷಣವೇ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಪೊಲೀಸರು ಆ ಪ್ರದೇಶವನ್ನು ಸುತ್ತುವರಿದಿದ್ದಾರೆ. ಈ ಭೀಕರ ಕೃತ್ಯದಲ್ಲಿ ಭಾಗಿಯಾಗಿರುವ ಭಯೋತ್ಪಾದಕರನ್ನು ಶೀಘ್ರದಲ್ಲೇ ತಟಸ್ಥಗೊಳಿಸುತ್ತೇವೆ. ಭಯೋತ್ಪಾದಕರನ್ನು ಪತ್ತೆಕಾರ್ಯ ಪ್ರಗತಿಯಲ್ಲಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

Sneha Gowda

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

7 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

31 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago