News Karnataka Kannada
Tuesday, April 30 2024
ಜಮ್ಮು-ಕಾಶ್ಮೀರ

ಕುಪ್ವಾರಾದಲ್ಲಿ​ ಎನ್​ಕೌಂಟರ್: ಪಾಕ್ ಭಯೋತ್ಪಾದಕ ಸೇರಿ ಇಬ್ಬರು ಎಲ್​​ಇಟಿ ಉಗ್ರರು ಹತ್ಯೆ

Terrorists open fire on army vehicle
Photo Credit : IANS

ಕುಪ್ವಾರ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಚಕ್ತಾರಸ್ ಕಂಡಿ ಪ್ರದೇಶದಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ನ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.

ಹತ್ಯೆಗೀಡಾದ ಇಬ್ಬರಲ್ಲಿ ಒಬ್ಬ ಪಾಕಿಸ್ತಾನಿ ಪ್ರಜೆ ತುಫೈಲ್ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಕುಪ್ವಾರಾದ ಚಕ್ತಾರಸ್ ಕಂಡಿ ಪ್ರದೇಶದಲ್ಲಿ ಇಂದು ಬೆಳಗ್ಗೆಯಿಂದಲೇ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಆರಂಭವಾಗಿದೆ. ಪೊಲೀಸರು ಮತ್ತು ಸೇನೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದಕ್ಕೂ ಮುನ್ನ ಸೋಮವಾರ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಎಲ್‌ಇಟಿಗೆ ಸಂಬಂಧಿಸಿದ ಇನ್ನೊಬ್ಬ ಪಾಕಿಸ್ತಾನಿ ಭಯೋತ್ಪಾದಕನನ್ನು ಸೇನೆ ಹೊಡೆದುರುಳಿಸಿತ್ತು. ಆದರೆ, ಈ ವೇಳೆ ಮೂವರು ಉಗ್ರರು ತಪ್ಪಿಸಿಕೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು