ಜಮ್ಮುಕಾಶ್ಮೀರ: ನಿರ್ಮಾಣ ಹಂತದ ಸೇತುವೆ ಕುಸಿದು 27 ಮಂದಿ ಗಾಯ

 ಜಮ್ಮುಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆ ಮೇಲಿನ ಕಬ್ಬಿಣದ ಶಟರ್ ಕುಸಿದು ಕನಿಷ್ಠ 27 ಜನರು ಗಾಯಗೊಂಡಿದ್ದಾರೆ.ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜಿ(ಜಿಎಂಸಿ)ಗೆ ದಾಖಲಿಸಲಾಗಿದೆ.

ಭಾನುವಾರ ಸಂಜೆ 4.15 ರ ಸುಮಾರಿಗೆ ಎರಡು ಪಿಲ್ಲರ್‌ಗಳಿಗೆ ಸಂಪರ್ಕ ಕಲ್ಪಿಸುವ ಕಬ್ಬಿಣದ ಶಟರಿಂಗ್‌ ಕುಸಿದು 27 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಪ್ರಮುಖ ಸೇತುವೆಯನ್ನು ಬಾರ್ಡರ್ ರೋಡ್ಸ್ ಆರ್ಗನೈಸೇಶನ್(BRO) ರಾಮ್‌ಗಢ-ಕೋಲ್‌ ಪುರದಲ್ಲಿ ದೇವಿಕಾ ನದಿಯ ಮೇಲೆ ನಿರ್ಮಿಸುತ್ತಿದೆ.

ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಪ್ರಾರಂಭಿಸಿ ಎಲ್ಲಾ ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಪ್ರಾರಂಭಿಸಲಾಯಿತು ಎಂದು ಸಾಂಬಾ ಡೆಪ್ಯೂಟಿ ಕಮಿಷನರ್ ಅನುರಾಧಾ ಗುಪ್ತಾ ಹೇಳಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಧಾವಿಸಿದ ನಂತರ ಅವರು ರಕ್ಷಣಾ ಕಾರ್ಯಾಚರಣೆ ಮೇಲ್ವಿಚಾರಣೆ ಮಾಡಿದರು. ನಂತರ ಅವರು ಸಮುದಾಯ ಆರೋಗ್ಯ ಕೇಂದ್ರ ರಾಮ್‌ಘರ್ ಮತ್ತು ವಿಜಯಪುರ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ನಮ್ಮ ಆದ್ಯತೆ ರಕ್ಷಣಾ ಕಾರ್ಯಾಚರಣೆಯಾಗಿತ್ತು. ಅಪಘಾತದ ಕಾರಣವನ್ನು ಪರಿಶೀಲಿಸಲು ಸೋಮವಾರ ವಿಚಾರಣೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Swathi MG

Recent Posts

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

7 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

17 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

32 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

54 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

2 hours ago