ಜಮ್ಮು ಕಾಶ್ಮೀರ:ಬುದ್ಗಾಮ್ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ಭಯೋತ್ಪಾದಕರ ಗುಂಪು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್ಕೌಂಟರ್ನಲ್ಲಿ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ.ಭಯೋತ್ಪಾದಕರು ಅಡಗಿರುವ ಸ್ಥಳದಲ್ಲಿ ಭದ್ರತಾ ಪಡೆಗಳು ಸುತ್ತುವರೆದಂತೆ, ಅವರು ಭಾರೀ ಪ್ರಮಾಣದ ಗುಂಡಿನ ದಾಳಿಗೆ ಬಂದು ಪ್ರತಿದಾಳಿ ನಡೆಸಿದರು.
ಭದ್ರತಾ ಪಡೆಗಳ ಜಂಟಿ ತಂಡವು ಝೋಲ್ವಾ ಕ್ರಾಲ್ಪೋರ್ ಚದೂರದಲ್ಲಿ ಪ್ರದೇಶವನ್ನು ಸುತ್ತುವರಿದ ನಂತರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು ಮತ್ತು ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.
ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿ ಮಾಹಿತಿ ತಿಳಿಸಿದ್ದಾರೆ.ಎನ್ಕೌಂಟರ್ ಇನ್ನೂ ನಡೆಯುತ್ತಿದೆ ಮತ್ತು ಈ ಪ್ರದೇಶದಲ್ಲಿ ಒಂದೆರಡು ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂದು ಮೂಲಗಳು ಸೂತಿಳಿಸಿವೆ . ಎನ್ಕೌಂಟರ್ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.