ಜಮ್ಮು-ಕಾಶ್ಮೀರ

ಜಮ್ಮು: ಕಟ್ಟಡದಲ್ಲಿ ಅಗ್ನಿ ಅವಘಡ, ನಾಲ್ವರು ಸಾವು, 15 ಮಂದಿಗೆ ಗಾಯ

ಜಮ್ಮು : ದೊಡ್ಡ ಪ್ರಮಾಣದಲ್ಲಿ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ನಾಲ್ವರು ಮೃತಪಟ್ಟು 15 ಮಂದಿ ಗಾಯಗೊಂಡಿರುವ ಘಟನೆ ಜಮ್ಮುವಿನಲ್ಲಿ ಕಳೆದ ರಾತ್ರಿ ಸಂಭವಿಸಿದೆ.

ಗುಜರಿ ವಸ್ತುಗಳ ಅಂಗಡಿಯ ನೆಲಮಹಡಿಯಲ್ಲಿ ದುರಂತ ಸಂಭವಿಸಿದ್ದು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ದುರ್ಘಟನೆ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ.

ಬೆಂಕಿಯ ಜ್ವಾಲೆ ಕಾಣಿಸಿಕೊಂಡ ತಕ್ಷಣವೇ ಇಡೀ ಕಟ್ಟಡಕ್ಕೆ ವ್ಯಾಪಿಸಿತು. ಅಲ್ಲಿ ಇಟ್ಟಿದ್ದ ಎಲ್ ಪಿಜಿ ಸಿಲೆಂಡರ್ ಗಳು ಸ್ಫೋಟಗೊಂಡು ಇನ್ನಷ್ಟು ಬೆಂಕಿಯ ಜ್ವಾಲೆ ಹಬ್ಬಿತು ಎಂದು ಜಮ್ಮುವಿನ ಹಿರಿಯ ಪೊಲೀಸ್ ಸೂಪರಿಂಟೆಂಡೆಂಟ್ ಚಂದನ್ ಕೊಹ್ಲಿ ತಿಳಿಸಿದ್ದಾರೆ.

ಮಗು ಸೇರಿದಂತೆ ಮೂವರು ಸ್ಥಳದಲ್ಲಿಯೇ ಸಜೀವ ದಹನವಾಗಿದ್ದು ಇತರ 15 ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಮತ್ತೊಂದು ಮೃತದೇಹವನ್ನು ನಂತರ ಹೊರತೆಗೆಯಲಾಯಿತು.

ಕಟ್ಟಡದಲ್ಲಿ ಕೂಲಿ ಕೆಲಸ ಮಾಡುತ್ತಿದ್ದವರಲ್ಲಿ ಬಹುತೇಕರು ಅಸ್ಸಾಂ ಮೂಲದವರಾಗಿದ್ದಾರೆ. ಗಾಯಗೊಂಡ ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಮೃತರ ಗುರುತು ತಕ್ಷಣಕ್ಕೆ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.

ನಿನ್ನೆ ಸಾಯಂಕಾಲ 6.10 ನಿಮಿಷ ಸುಮಾರಿಗೆ ಬೆಂಕಿ ಅವಘಡ ಬಗ್ಗೆ ಕರೆಬಂದ ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಶೀಲಿಸಲಾಯಿತು ಎಂದು ಅಗ್ನಿ ಶಾಮಕ ಮತ್ತು ತುರ್ತು ಸೇವೆಯ ವಕ್ತಾರರು ತಿಳಿಸಿದ್ದಾರೆ.

ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಮುಕೇಶ್ ಸಿಂಗ್ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಜಮ್ಮು-ಕಾಶ್ಮೀರ ರಾಜ್ಯಪಾಲ ಲೆ.ಗವರ್ನರ್ ಮನೋಜ್ ಸಿನ್ಹ, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದು ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಂಭೀರ ಗಾಯಗೊಂಡವರ ಚಿಕಿತ್ಸೆಗೆ 1 ಲಕ್ಷ ರೂಪಾಯಿ ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ ತಲಾ 25 ಸಾವಿರ ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ.

Gayathri SG

Recent Posts

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

13 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

23 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

36 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

11 hours ago