ಜಮ್ಮು-ಕಾಶ್ಮೀರ : ಜಮ್ಮು ಕಾಶ್ಮೀರದಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು ಇಬ್ಬರು ಗಾಯಗೊಂಡಿದ್ದಾರೆ. ಶ್ರೀನಗರದ ಆಲಿಮ್ಸಾಜಿದ್ ಈದ್ಗಾ ಸಮೀಪ ಈ ದಾಳಿ ನಡೆದಿದೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿಯನ್ನು ಗುರಿಯಾಗಿಸಿ ಉಗ್ರರು ಬುಧವಾರ ಗ್ರೆನೇಡ್ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕ ಗಾಯಗೊಂಡಿದ್ದಾರೆ.
ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರನ್ನು ಗುರಿಯಾಗಿಸಿ ಕೊಲ್ಲುವ ಪ್ರಕರಣಗಳು ಹೆಚ್ಚಾಗಿವೆ. ಕಳೆದ ಸೋಮವಾರ ಭಯೋತ್ಪಾದಕರು ಬೊಹ್ರಿ ಕಾದರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬನನ್ನು ಕೊಂದಿದ್ದರು. ಇದೀಗ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ.