ಕುಲ್ಗಾಂ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಅಪರಿಚಿತ ಭಯೋತ್ಪಾದಕನೊಬ್ಬನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಕುಲ್ಗಾಂನ ಚಾವಲ್ಗಾಮ್ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಎನ್ಕೌಂಟರ್ ಆರಂಭವಾಗಿದೆ.
ಈಗಾಗಲೇ ಓರ್ವನನ್ನು ಭದ್ರತಾ ಪಡೆ ಸದೆಬಡಿದಿದೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ. ಭದ್ರತಾ ಪಡೆ ಮತ್ತಷ್ಟು ರ್ಕಾರ್ಯಾಚರಣೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.