ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಗುಂಡಿನ ದಾಳಿಗೆ ಓರ್ವ ನಾಗರಿಕ ಸಾವನ್ನಪ್ಪಿದ್ದಾನೆ.
ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಓರ್ವ ನಾಗರಿಕನನ್ನು ಹತ್ಯೆ ಮಾಡಿದ್ದಾರೆ. ಶ್ರೀನಗರದ ಮೆರ್ಜನ್ ಫೋರಾ, ಈದ್ಗಾ, ಪಿ ಎಸ್ ಸಫಕದಲ್ ಎಂಬಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ರೂಫ್ ಅಹ್ಮದ್ ಎಂಬ ನಾಗರಿಕನ ಮೇಲೆ ದಾಳಿ ನಡೆಸಿದ್ದಾರೆ.
ಅನಂತ್ ನಾಗ್ ನ ಪಿ ಎಸ್ ಬೆಹರಾದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಕೂಡ ಗುಂಡಿನ ದಾಳಿ ನಡೆದಿದ್ದು, ಪೊಲೀಸ್ ಸಿಬ್ಬಂದಿ ಮೊಹಮದ್ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.