ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಉಗ್ರರನ್ನು ಹತ್ಯೆ ಮಾಡಿದ ಸೇನಾಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್’ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಎಂದು ಬುಧವಾರ ತಿಳಿದುಬಂದಿದೆ. ಶೋಪಿಯಾನ್ ಜಿಲ್ಲೆಯ ಡ್ರಾಗಡ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಗಳು ಲಭ್ಯವಾಗುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು.

ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದ ಸೇನಾಪಡೆ ಎನ್ಕೌಂಟರ್ ನಡೆಸಿದೆ. ಈ ವೇಳೆ ಇಬ್ಬರು ಉಗ್ರರು ಹತರಾಗಿದ್ದಾರೆಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಹತ್ಯೆಯಾದ ಉಗ್ರರ ಗುರುತು ಪತ್ತೆ ಹಚ್ಚುವ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

Gayathri SG

Recent Posts

ಇಂದು ಮಧ್ಯಾಹ್ನದಿಂದಲೇ ಸಿಲಿಕಾನ್​ ಸಿಟಿಯಲ್ಲಿ ಭರ್ಜರಿ ಮಳೆ

ಬರೋಬ್ಬರಿ 6 ತಿಂಗಳ ಬಳಿಕ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಭರ್ಜರಿ ಮಳೆಯಾಗಿದೆ. ಇಂದು ಮಧ್ಯಾಹ್ನದಿಂದಲೇ ಬೆಂಗಳೂರಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ನಗರದ…

4 mins ago

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

ಶಾಲಾ ವಿದ್ಯಾರ್ಥಿಗಳಿಗೆ ವನ್ಯ ಸಂಪತ್ತು ಮತ್ತು ಪ್ರಾಣಿಸಂಕುಲದ ಬಗ್ಗೆ ಅರಿವು ಪ್ರಾಮುಖ್ಯತೆ ವಿಚಾರ ತಿಳಿಯಪಡಿಸಲು ಪ್ರಾರಂಭಿಸಿದ್ದ ಯುವಮಿತ್ರ ಕಾರ್ಯಕ್ರಮಕ್ಕೆ ಇಂಡಿಯಾ…

6 mins ago

ಕಾಂಗ್ರೆಸ್‌ನವರಿಗೆ ಇರುವುದೇ ಕೆಟ್ಟ ಬುದ್ಧಿ: ಭಗವಂತ್ ಖೂಬಾ

ಮೋದಿ ಕುರಿತ ಶಾಸಕ ರಾಜು ಕಾಗೆ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೀದರ್ ನಲ್ಲಿ ರಾಜು ಕಾಗೆ ವಿರುದ್ಧ ಭಗವಂತ್…

21 mins ago

ರಮೇಶ ಜಿಗಜಿಣಗಿ ಪರ ಮತಪ್ರಚಾರ, ಮಹಾಸಂಪರ್ಕ ಅಭಿಯಾನ

ಲೋಕಸಭಾ ಚುನಾವಣೆ ಹಿನ್ನೆಲೆ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರವಾಗಿ ವಾರ್ಡ್ ಸಂಖ್ಯೆ 29…

28 mins ago

ಬಿಜೆಪಿ ಪ್ರಚಾರದ ನಿಮಿತ್ತ ಅಫಜಲಪುರಕ್ಕೆ ಕರಾವಳಿ ಶಾಸಕ ಯಶ್ ಪಾಲ್ ಸುವರ್ಣ

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ್ ಅವರ ಪರವಾಗಿ ಕರಾವಳಿ ತೀರದ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ…

45 mins ago

ಮೃಣಾಲ್ ಹೆಬ್ಬಾಳ್ಕರ್​ ಪರ ನೇಹಾ ತಂದೆ ಪ್ರಚಾರ; ನೆಟ್ಟಿಗರ ಆಕ್ರೋಶ

ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ.

1 hour ago