ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ನಡೆದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಸ್ವಯಂ ಘೋಷಿತ ಕಮಾಂಡರ್ನನ್ನು ಹತ್ಯೆ ಮಾಡಲಾಗಿದೆ.
ಕಾರ್ಯಾಚರಣೆ ಸಂದರ್ಭ ಮೂವರು ಯೋಧರು ಮತ್ತು ಓರ್ವ ನಾಗರಿಕ ಗಾಯಗೊಂಡಿದ್ದಾರೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
‘ಸ್ವಯಂ ಘೋಷಿತ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ನಿಸಾರ್ ಖಾಂಡೆಯನ್ನು ಹತ್ಯೆ ಮಾಡಲಾಗಿದೆ. 1 ಎಕೆ 47 ರೈಫಲ್ ಸೇರಿದಂತೆ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ’ ಎಂದು ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಅನಂತನಾಗ್ ಜಿಲ್ಲೆಯ ರಿಶಿಪೋರಾ ಪ್ರದೇಶದಲ್ಲಿ ಶುಕ್ರವಾರ ಸಂಜೆ ಎನ್ಕೌಂಟರ್ ಕಾರ್ಯಾಚರಣೆ ಆರಂಭಗೊಂಡಿದೆ.
ಆಮ್ ಆದ್ಮಿ ಪಕ್ಷಕ್ಕೆ ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್ಸಿಆರ್ಎ ತನಿಖೆಯನ್ನು ಕೋರಿ…
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…