ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ನಿಧನ

ಶ್ರೀನಗರ: ಹುರಿಯತ್ ಮುಖಂಡ ಸೈಯದ್ ಅಲಿ ಶಾ ಗಿಲಾನಿ ನಿಧನರಾಗಿದ್ದಾರೆ. ಗಿಲಾನಿ ಜಮ್ಮು ಕಾಶ್ಮೀರದಲ್ಲಿ ಭಾರತದ ಪ್ರತ್ಯೇಕತಾ ಹೋರಾಟ ನಡೆಸುತ್ತಿದ್ದರು.

ತೆಹ್ರಿಕ್-ಎ-ಹುರಿಯತ್ ಎಂಬ ಕಟ್ಟರ್ ಪ್ರತ್ಯೇಕತಾವಾದಿ ಸಂಘಟನೆಯ ಸಂಸ್ಥಾಪಕ ಸಯದ್ ಅಲಿ ಶಾ ಗಿಲಾನಿ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿಲಾನಿ ಅವರಿಗೆ 92 ವರ್ಷ ವಯಸ್ಸಾಗಿತ್ತು. ಸೈಯದ್ ಗಿಲಾನಿ ಮೂರು ದಶಕಗಳಿಗೂ ಹೆಚ್ಚಿನ ಕಾಲ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕ ರಾಜ್ಯವಾಗಬೇಕು ಎಂದು ಹೋರಾಟ ನಡೆಸಿದ್ದರು, ಬಳಿಕ ತಮ್ಮ ಸ್ಥಾನಕ್ಕೆ ಕಳೆದ ವರ್ಷವಷ್ಟೇ ರಾಜೀನಾಮೆ ನೀಡಿದ್ದರು.

ನೂರಾರು ಕೋಟಿ ರು ಒಡೆಯ ಗಿಲಾನಿ ಅಲ್ಲದೆ ಪುತ್ರರಾದ ನಾಸೀಮ್ ನಯೀಮ್, ಪುತ್ರಿಯರಾದ ಅನಿಷಾ, ಫಾರ್ ಹಾತ್ ಸೇರಿ ಆರು ಜನರ ಮೇಲೆ ಎನ್ಐಎ ಅಧಿಕಾರಿಗಳು ಕಣ್ಣಿಟ್ಟಿದ್ದು, ಅಕ್ರಮ ಆಸ್ತಿ ಗಳಿಕೆ, ಪಾಕಿಸ್ತಾನದಿಂದ ಹಣ ಪಡೆದು, ಕಣಿವೆ ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಬಳಕೆ ಮುಂತಾದ ಆರೋಪಗಳ ಕುರಿತ ತನಿಖೆ ಜಾರಿಯಲ್ಲಿದೆ. 1972, 1977, 1987ರಲ್ಲಿ ಸೋಪೋರ್ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಚುನಾಯಿತರಾದ ಅವರು ಕಾಶ್ಮೀರದ ಪ್ರತ್ಯೇಕತಾವಾದಿಗಳಿಗೆ ಧ್ವನಿಯಾಗಿದ್ದರು

ಅವರು ಇಬ್ಬರು ಗಂಡು ಮಕ್ಕಳು ಸೇರಿ ಆರು ಮಕ್ಕಳನ್ನ ಅಗಲಿದ್ದಾರೆ. ಕಳೆದ 20 ವರ್ಷಗಳಿಂದ ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಗಿಲಾನಿ ನಿನ್ನೆ ರಾತ್ರಿ 10.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಮೂರು ಬಾರಿ ಶಾಸಕರಾಗಿದ್ದ ಗೀಲಾನಿ ಅವರ ನಿಧನಕ್ಕೆ ಹಲವು ಕಾಶ್ಮೀರ ರಾಜಕಾರಣಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಗಿಲಾನಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Sneha Gowda

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

22 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

47 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago