ಶ್ರೀನಗರ: ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳು ಭಾನುವಾರ ನಡೆಸಿದ ಎನ್ಕೌಂಟರ್ನಲ್ಲಿ ಉಗ್ರನೊಬ್ಬ ಬಲಿಯಾಗಿದ್ದಾನೆ.ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದ್ದಿದ್ದು, ಇಂದೂ ಕೂಡ ಸೇನೆ ಓರ್ವ ಉಗ್ರನನ್ನು ಹೊಡೆದುರುಳಿಸಿವೆ.
ಕುಪ್ವಾರದಲ್ಲಿ ಉಗ್ರ ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದು ಶೋಧ ನಡೆಸಿವೆ. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಉಗ್ರನನ್ನು ಭದ್ರತಾಪಡೆಗಳು ಹೊಡೆದುರುಳಿಸಿವೆ.
ಘಟನಾ ಪ್ರದೇಶದಲ್ಲಿ ಸೇನಾ ಕಾರ್ಯಾಚರಣೆ ಮುಂದುವರೆದಿದ್ದು, ಸುತ್ತಮುತ್ತಲ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.