ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಶೋಪಿಯಾನ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ನಿಷೇಧಿತ ಲಷ್ಕರ್-ಎ-ತೋಯ್ಬಾ, ದಿ ರೆಸಿಸ್ಟೆನ್ಸ್ ಫ್ರಂಟ್ನ ಮೂವರು ಭಯೋತ್ಪಾದಕರು ಹತರಾಗಿದ್ದಾರೆ.
ಭಯೋತ್ಪಾದಕರು ಅಡಗಿರುವ ಖಚಿತ ಮಾಹಿತಿ ಅನ್ವಯ ಪೊಲೀಸರು, ಸೇನೆ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರಿರುವ ಪ್ರದೇಶವನ್ನು ಸುತ್ತುವರಿದಿತ್ತು. ನಂತರ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರು ಬಲಿಯಾಗಿದ್ದಾರೆ.
ಉಗ್ರರ ಬಳಿ ಇದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಶೋಧಕಾರ್ಯ ಇನ್ನು ಮುಂದುವರಿದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.