News Karnataka Kannada
Sunday, April 28 2024
ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರ ಶೋಧ ಕಾರ್ಯಾಚರಣೆಯಲ್ಲಿ ಮೂವರು ವಶಕ್ಕೆ

Jammukashmir
Photo Credit :

ಜಮ್ಮು ಮತ್ತು ಕಾಶ್ಮೀರದ ಗಡಿಯ ಪೂಂಛ್‌ ಮತ್ತು ರಾಜೌರಿ ಜಿಲ್ಲೆಗಳ ಅರಣ್ಯ ಭಾಗದಲ್ಲಿ ಸತತ ಏಳನೇ ದಿನವೂ ಶೋಧ ಕಾರ್ಯಾಚರಣೆಯು ಮುಂದುವರಿದಿದೆ. ಭದ್ರತಾ ಸಿಬ್ಬಂದಿಯು ತಾಯಿ-ಮಗ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದು, ತನಿಖೆಗೆ ಒಳಪಡಿಸಿದ್ದಾರೆ.

ಕಳೆದ ಒಂದು ವಾರದಲ್ಲಿ ಒಂದೆರಡು ಬಾರಿ ಈ ಭಾಗದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿತ್ತು. ಒಟ್ಟು ಒಂಭತ್ತು ಯೋಧರು ಹುತಾತ್ಮರಾಗಿದ್ದಾರೆ.

ಭಟ್ಟಾ ದುರಿಯನ್‌ ಅರಣ್ಯ ಭಾಗದಲ್ಲಿ ವಾಸವಿದ್ದ 45 ವರ್ಷದ ಮಹಿಳೆ, ಆಕೆಯ ಮಗ ಮತ್ತು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಇವರು, ಉಗ್ರರಿಗೆ ಪ್ರಯಾಣ ಸೇರಿದಂತೆ ಇತರೆ ನೆರವು ನೀಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇವರು, ಸ್ವಯಂಪ್ರೇರಿತವಾಗಿ ನೆರವು ನೀಡಿದ್ದರೆ ಅಥವಾ ಉಗ್ರರ ಬೆದರಿಕೆಗೆ ಮಣಿದು ನೀಡಿದ್ದರೇ ಎಂಬ ಬಗ್ಗೆ ತನಿಖೆ ನಡೆದಿದೆ. ಉಗ್ರರು ಅಡಗಿದ್ದ ಭಾಗ ಬೆಟ್ಟಗುಡ್ಡಗಳಿಂದ ಆವೃತವಾಗಿದ್ದು, ದಟ್ಟ ಅರಣ್ಯದಿಂದ ಕೂಡಿದೆ. ಇದರಿಂದಾಗಿ ಕಾರ್ಯಾಚರಣೆಗೆ ತೊಡಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು