ಜಮ್ಮು ಮತ್ತು ಕಾಶ್ಮೀರದ ಗಡಿಯ ಪೂಂಛ್ ಮತ್ತು ರಾಜೌರಿ ಜಿಲ್ಲೆಗಳ ಅರಣ್ಯ ಭಾಗದಲ್ಲಿ ಸತತ ಏಳನೇ ದಿನವೂ ಶೋಧ ಕಾರ್ಯಾಚರಣೆಯು ಮುಂದುವರಿದಿದೆ. ಭದ್ರತಾ ಸಿಬ್ಬಂದಿಯು ತಾಯಿ-ಮಗ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದು, ತನಿಖೆಗೆ ಒಳಪಡಿಸಿದ್ದಾರೆ.
ಕಳೆದ ಒಂದು ವಾರದಲ್ಲಿ ಒಂದೆರಡು ಬಾರಿ ಈ ಭಾಗದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿತ್ತು. ಒಟ್ಟು ಒಂಭತ್ತು ಯೋಧರು ಹುತಾತ್ಮರಾಗಿದ್ದಾರೆ.
ಭಟ್ಟಾ ದುರಿಯನ್ ಅರಣ್ಯ ಭಾಗದಲ್ಲಿ ವಾಸವಿದ್ದ 45 ವರ್ಷದ ಮಹಿಳೆ, ಆಕೆಯ ಮಗ ಮತ್ತು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಇವರು, ಉಗ್ರರಿಗೆ ಪ್ರಯಾಣ ಸೇರಿದಂತೆ ಇತರೆ ನೆರವು ನೀಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇವರು, ಸ್ವಯಂಪ್ರೇರಿತವಾಗಿ ನೆರವು ನೀಡಿದ್ದರೆ ಅಥವಾ ಉಗ್ರರ ಬೆದರಿಕೆಗೆ ಮಣಿದು ನೀಡಿದ್ದರೇ ಎಂಬ ಬಗ್ಗೆ ತನಿಖೆ ನಡೆದಿದೆ. ಉಗ್ರರು ಅಡಗಿದ್ದ ಭಾಗ ಬೆಟ್ಟಗುಡ್ಡಗಳಿಂದ ಆವೃತವಾಗಿದ್ದು, ದಟ್ಟ ಅರಣ್ಯದಿಂದ ಕೂಡಿದೆ. ಇದರಿಂದಾಗಿ ಕಾರ್ಯಾಚರಣೆಗೆ ತೊಡಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…