ಶ್ರೀನಗರ: ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಶೋಪಿಯಾನ್ ಜಿಲ್ಲೆಯ ತುರ್ಕ್ವಾಂಗಮ್ ಪ್ರದೇಶ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಗಳು ಲಭ್ಯವಾದ ಹಿನ್ನೆಲೆಯಲ್ಲಿ ಸೇನಾಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.
ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ.
ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿದ್ದು ಓರ್ವ ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.