ಜಮ್ಮು-ಕಾಶ್ಮೀರ: ಹೆರಿಗೆ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಈ ಬಗ್ಗೆ ಎನ್ಎನ್ ವರದಿ ಮಾಡಿದ್ದು, ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ನ ಶಾಯಿರ್ ಬಾಗ್ ನ ಹೆರಿಗೆ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯಲ್ಲಿ ಮಂಗಳವಾರ ಸಿಲಿಂಡರ್ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.
ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮದಿಂದಾಗಿ ಆ ಸಮಯದಲ್ಲಿ ಎಷ್ಟು ಜನರು ಆಸ್ಪತ್ರೆಯಲ್ಲಿದ್ದರು, ಎಷ್ಟು ಜನರು ಗಾಯಗೊಂಡಿದ್ದಾರೆ ಎನ್ನುವ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.