ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ರಿಯಾಸಿ ಜಿಲ್ಲೆಯ ಕತ್ರಾ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಭೂಕಂಪನ ಸಂಭವಿಸಿದ್ದು,ರಿಕ್ಟರ್ ಮಾಪಕದಲ್ಲಿ 3.5 ರಷ್ಟು ತೀವ್ರತೆ ದಾಖಲಾಗಿದೆ.
ಭೂಕಂಪನದ ಮೇಲ್ವಿಚಾರಣೆಗಾಗಿ ಸರ್ಕಾರದ ನೋಡಲ್ ಏಜೆನ್ಸಿಯಾದ ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ಕತ್ರಾದಿಂದ ಐದು ಕಿಲೋಮೀಟರ್ ಆಳದಲ್ಲಿ ಮತ್ತು ಸುಮಾರು 84 ಕಿಲೋಮೀಟರ್ ಪೂರ್ವದಲ್ಲಿ ಭೂಕಂಪ ಸಂಭವಿಸಿದೆ ಎಂದು ಮಾಹಿತಿ ನೀಡಿದೆ.
ಈ ಬಗ್ಗೆ ಇನ್ನೂ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎನ್ನಲಾಗಿದೆ.