ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಎಲ್ ಒಸಿಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದ್ದು, ಈ ವೇಳೆ ನಾಲ್ವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಅನುಮಾನಾಸ್ಪದ ಚಲನವಲನ ಗಮನಿಸಿದ ಸೇನೆ , ಉತ್ತರ ಕಾಶ್ಮೀರದ ಉರಿ ಸೆಕ್ಟರ್ನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ತಡೆ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ‘ಉರಿಯಲ್ಲಿನ ಎಲ್ಒಸಿಯಾದ್ಯಂತ ನುಸುಳುಕೋರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.