News Karnataka Kannada
Wednesday, May 01 2024
ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರ: ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರ ಹತ್ಯೆ

Terrorists open fire on army vehicle
Photo Credit :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆ ಚುರುಕುಗೊಂಡಿದೆ. ಗುರುವಾರ ರಾತ್ರಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಲಷ್ಕರ್‌ ಎತೈಬಾದ (ಎಲ್‌ಇಟಿ) ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಶ್ರೀನಗರದ ಸೌರ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಒಂದು ಎಕೆ-47 ಬಂದೂಕು ಹಾಗೂ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಅವಂತಿಪೊರಾದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಉಗ್ರರು ಕಲಾವಿದೆ ಅಮ್ರೀನ್‌ ಭಟ್‌ ಹತ್ಯೆ ಪ್ರಕರಣದಲ್ಲಿ ನಂಟು ಹೊಂದಿದ್ದರು ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

ಕಲಾವಿದೆ ಅಮ್ರೀನ್‌ ಭಟ್‌ ಅವರನ್ನು ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಮೇ 25ರಂದು ಉಗ್ರರು ಹತ್ಯೆ ಮಾಡಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗಿದ್ದ ಅಮ್ರೀನ್‌ ಭಟ್‌, ಅವರ ಗಾಯನ, ಕಿರುಚಿತ್ರ ಸೇರಿದಂತೆ ಹಲವು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು.

ಒಟ್ಟಾರೆಯಾಗಿ ಕಳೆದ ಮೂರು ದಿನಗಳಲ್ಲಿ 10 ಮಂದಿ ಭಯೋತ್ಪಾಕರನ್ನು ಹತ್ಯೆ ಮಾಡಲಾಗಿದೆ ಎಂದು ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯನ್ನು ಸಮನ್ವಯದಿಂದ ಹಾಗೂ ಸಕ್ರಿಯವಾಗಿ ಆರಂಭಿಸುವಂತೆ ಭದ್ರತಾ ಪಡೆಗಳಿಗೆ ಹಾಗೂ ಪೊಲೀಸರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಸೂಚಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು