ದೋಡಾ ಜಿಲ್ಲೆಯಲ್ಲಿ ಶಂಕಿತ ಎಲ್ ಇಟಿ ಉಗ್ರನ ಬಂಧನ

ಶ್ರೀನಗರ: ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಶಂಕಿತ ಎಷ್ಕರ್ – ಇ- ತೊಯ್ಬಾ ಸಂಘಟನೆಯ ಉಗ್ರನೊಬ್ಬನನ್ನು ಬಂಧಿಸಲಾಗಿದೆ, ಪಿಸ್ತೂಲ್, ಎರಡು ಮ್ಯಾಗಜೀನ್ ಗಳು ಹಾಗೂ ಒಂಬತ್ತು ಸುತ್ತಿನ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.

ಥಾತ್ರಿಯಲ್ಲಿ ಪೊಲೀಸರು, ರಾಷ್ಟ್ರೀಯ ರೈಫಲ್ಸ್ ಮತ್ತು ಸಶಸ್ತ್ರ ಸೀಮಾ ಬಾಲ್ ಜಂಟಿ ಶೋಧ ತಂಡ ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಸಜನ್-ಬಜರ್ನಿ ಗ್ರಾಮದ ನಿವಾಸಿ ಆದಿಲ್ ಇಕ್ಬಾಲ್ ಭಟ್ ಎಂಬಾತನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ಪಾಕಿಸ್ತಾನದಿಂದ ಕಾರ್ಯಾಚರಿಸುತ್ತಿರುವ ದೋಡಾದ ಭಯೋತ್ಪಾದಕ ಮೊಹಮ್ಮದ್ ಅಮೀನ್ ಅಲಿಯಾಸ್ ಮುಜಾಮಿಲ್ ಅಲಿಯಾಸ್ ಹರೂನ್ ಅಲಿಯಾಸ್ ಉಮರ್ ಇಕ್ಬಾಲ್ ಭಟ್ ನನ್ನು ನಿರ್ವಹಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಥಾತ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

Swathi MG

Recent Posts

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

10 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

22 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

32 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

51 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

51 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

1 hour ago