ನಾಗರಿಕ ಹತ್ಯೆ ಪ್ರಕರಣ: ಜಮ್ಮು ಕಾಶ್ಮೀರದ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ

ಜಮ್ಮು ಕಾಶ್ಮೀರ : ಕಾಶ್ಮೀರದಲ್ಲಿ ನಾಗರಿಕ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಷ್ಟ್ರೀಯ ತನಿಖಾ ದಳ ಮಂಗಳವಾರ ಏಕಕಾಲದಲ್ಲಿ ಜಮ್ಮು ಕಾಶ್ಮೀರ, ದೆಹಲಿ, ಉತ್ತರಪ್ರದೇಶದ 21 ಕಡೆಗಳಲ್ಲಿ ದಾಳಿ ನಡೆಸಿದೆ.

ಶಂಕಿತ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವವರ ಬಗ್ಗೆ ಮಾಹಿತಿ ಪಡೆದ ಎನ್ಐಎ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದ 16 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.

ಕಳೆದ ತಿಂಗಳು ಗುಜರಾತ್‌ನ ಮುಂಡ್ರಾ ಬಂದರಿನಲ್ಲಿ 3,000 ಕೆಜಿ ಹೆರಾಯಿನ್ ಡ್ರಗ್ಸ್ ವಶಕ್ಕೆ ಪಡೆದ ಬಗ್ಗೆ ಎನ್ಐಎ ದೆಹಲಿ ಮತ್ತು ಉತ್ತರ ಪ್ರದೇಶದ ಐದು ಸ್ಥಳಗಳಲ್ಲಿ ದಾಳಿ ನಡೆಸಿದೆ.

ಲಷ್ಕರ್-ಎ-ತೊಯ್ಬಾ, ಜೈಶ್-ಇ-ಮೊಹಮ್ಮದ್, ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಅಲ್-ಬದರ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವವರಿಗೆ ಈ ದಾಳಿ ಶಿಸ್ತಿನ ಪಾಠ ಕಲಿಸಿದಂತಾಗಿದೆ ಎಂದು ಎನ್ಐಎ ತಿಳಿಸಿದೆ.

ಈಗಾಗಲೇ ಕಾಶ್ಮೀರದಲ್ಲಿ ಐದು ದಿನಗಳಲ್ಲಿ ಏಳು ನಾಗರಿಕರು, ಅವರಲ್ಲಿ ನಾಲ್ವರು ಅಲ್ಪಸಂಖ್ಯಾತ ಹಿಂದೂಗಳು ಮತ್ತು ಮೂವರು ಸಿಖ್ ಸಮುದಾಯದವರು ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟಿದ್ದಾರೆ

Sneha Gowda

Recent Posts

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

9 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

20 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

30 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

36 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

41 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

43 mins ago