ಜಮ್ಮು ಕಾಶ್ಮೀರ : ಇಂದು ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಯೋಧ ಹಾಗೂ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಈ ಹಿಂದೆ ಲಷ್ಕರ್ ಎ ತೋಯ್ಬಾದ ಡೆಟೆನ್ಯೂ ಝೀಯಾ ಮುಸ್ತಾಫನನ್ನು ಭದ್ರತಾ ಸಿಬ್ಬಂದಿ ಬಂಧಿಸಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಡಗಿದ್ದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.
ಉಗ್ರರ ದಾಳಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ, ಒಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಪೂಂಚ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.