News Karnataka Kannada
Thursday, May 09 2024
ಜಮ್ಮು-ಕಾಶ್ಮೀರ

ಬಂಡಿಪೋರಾದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರರನ್ನು ಸದೆಬಡಿದ ಭದ್ರತಾ ಪಡೆ

Terrorist Pulwama Main 08072021
Photo Credit :

ಬಂಡಿಪೋರಾ: ಭಾರತದ ಸೇನಾ ಪಡೆ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಎನ್‌ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಬಂಡಿಪೋರಾದ ಸುಮ್ಬ್ಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದೆ. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಉಗ್ರರ ದಾಳಿಗೆ ದಿಟ್ಟ ಉತ್ತರವನ್ನು ಭದ್ರತಾ ಪಡೆ ನೀಡಿದ್ದಾರೆ. ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು