ಜಮ್ಮು ಮತ್ತು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದ ಟ್ಯಾಕ್ಸಿ ನಿಲ್ದಾಣದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಆರು ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಂಡಿಪೋರಾದ ಟ್ಯಾಕ್ಸಿ ಸ್ಟಾಂಡ್ನಲ್ಲಿ ನಿಂತಿದ್ದ ಟಾಟಾ ಸುಮೋ ಸ್ಫೋಟಗೊಂಡಿದ್ದು, ಆರು ಮಂದಿಗೆ ಗಾಯವಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಸ್ಫೋಟದ ರಭಸಕ್ಕೆ ಟಾಟಾ ಸುಮೋ ಅಕ್ಕಪಕ್ಕ ಇದ್ದ ವಾಹನಗಳು ಜಖಂಗೊಂಡಿವೆ.