ಶ್ರೀನಗರ,ಮೇ.30: ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮುಂಜಾನೆ ನಡೆಸಿದ ಎನ್ಕೌಂಟರ್ನಲ್ಲಿ ಉಗ್ರನನ್ನು ಸದೆಬಡಿಯಲಾಗಿದೆ.
ಪುಲ್ವಾಮಾದ ಗುಂಡಿಪೋರಾದಲ್ಲಿ ಭದ್ರತಾ ಪಡೆಗಳು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿತ್ತು ಈ ವೇಳೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ.
ಆಗ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಸೇನೆ ಗುಂಡಿಗೆ ಬಲಿಯಾದ ಎಂದು ಪೊಲೀಸರು ತಿಳಿಸಿದ್ದಾರೆ. ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಭಾನುವಾರ ರಾತ್ರಿ ಭದ್ರತಾ ಪಡೆಗಳ ಎನ್ಕೌಂಟರ್ನಲ್ಲಿ ಪೊಲೀಸ್ ಪೇದೆ ರಿಯಾಜ್ ಅಹ್ಮದ್ ಹಂತಕ ಸೇರಿದಂತೆ ಇಬ್ಬರು ಜೈಶ-ಎ-ಮೊಹಮ್ಮದ್ ಉಗ್ರರು ಸಿಕ್ಕಿಬಿದ್ದಿದ್ದಾರೆ ಎಂದು ಹೇಳಿದ್ದರು.