ಜಮ್ಮು ಮತ್ತು ಕಾಶ್ಮೀರಕ್ಕೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನಿ ಉಗ್ರ ಬಾಬರ್ ಅಲಿ ಪತ್ರಾ (19) ಭಾರತೀಯ ಸೇನೆಗೆ ಸಿಕ್ಕಿಬಿದ್ದಿದ್ದು, ಈ ವೇಳೆ ಹಲವು ವಿಷಯಗಳನ್ನು ಬಾಯಿ ಬಿಟ್ಟಿದ್ದಾನೆ.
ತಾನು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನಿವಾಸಿಯಾಗಿದ್ದು, ಲಷ್ಕರ್-ಇ-ತೊಯ್ಬಾ ಭಯೋತ್ಪಾದಕ ಸಂಘಟನೆಯಿಂದ ತರಬೇತಿ ಪಡೆದಿದ್ದೇನೆ ಎಂದು ಹೇಳಿಕೊಂಡಿದ್ದಾನೆ.
ಮಾಧ್ಯಮದೊಂದಿಗೆ ಮಾತನಾಡುತ್ತಾ ಬಾಬರ್ ಅಲಿ ಪತ್ರಾ, ‘ನಾನು ಪಾಕಿಸ್ತಾನದ ಒಕರ ಪಂಜಾಬ್ ನಿವಾಸಿ. ನನ್ನ ತಂದೆ ತೀರಿಕೊಂಡಿದ್ದಾರೆ. ಮನೆಯಲ್ಲಿ ನನ್ನ ತಾಯಿ ಮತ್ತು ಅಕ್ಕ ಇದ್ದಾರೆ. ಅಕ್ಕನಿಗೆ ಮದುವೆಯಾಗಿದೆ. ನಾನು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನನಗೆ ಐಎಸ್ಐ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಅನಿಸ್ ಎಂಬಾತನ ಪರಿಚಯವಾಯಿತು.
ಅವನು ನನಗೆ ಹಣ ನೀಡುವುದಾಗಿ ಹೇಳಿದ್ದ. ನನಗೆ ಬಡತನವಿದ್ದ ಕಾರಣ ನಾನು ಅವನೊಂದಿಗೆ ಹೋಗಿ ಲಷ್ಕರ್ಗೆ ಸೇರಿಕೊಂಡೆ. ನಮಗೆ ತರಬೇತಿ ನೀಡುವ ಸಮಯದಲ್ಲಿ ಅವರು ನಮಗೆ 20,000 ರೂ. ನೀಡುತ್ತಿದ್ದರು. ತರಬೇತಿ ಮುಗಿದ ಬಳಿಕ ನಮಗೆ 30,000 ರೂ.ಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾನೆ.
ನಾವು ಭಾರತದ ಗಡಿ ನುಸುಳುತ್ತಿದ್ದ ವೇಳೆ ಭಾರತೀಯ ಸೇನೆಯು ನನ್ನ ಜೊತೆಗಿದ್ದ ಭಯೋತ್ಪಾದಕರಲ್ಲಿ ಒಬ್ಬನನ್ನು ಕೊಂದಿತು. ಆದರೆ ನಮ್ಮ ಜೊತೆಗಿದ್ದ ಉಳಿದ ನಾಲ್ವರು ಪರಾರಿಯಾಗಿದ್ದಾರೆ. ನಾನು ಭಯದಿಂದ ಅಲ್ಲೇ ಕುಳಿತೆ. ಸೈನಿಕರು ನನ್ನನ್ನು ಬಂಧಿಸಿದರು. ನಾವು ಒಳನುಸುಳಿಕೊಂಡು ನೇರವಾಗಿ ಪಟಾನ್ಗೆ ಹೋಗಬೇಕಾಗಿತ್ತು ಎಂದು ಆತ ತಿಳಿಸಿದ್ದಾನೆ.
ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…
ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…
ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…
ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…
ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…