ಜಮ್ಮು: ಜಮ್ಮು ಮತ್ತು ಕಾಶ್ಮೀರದ ತ್ರಿಕೂಟ ಬೆಟ್ಟಗಳ ಮೇಲಿರುವ ಪ್ರಸಿದ್ಧ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಹೊಸ ವರ್ಷದ ದಿನದಂದು ಭಕ್ತರ ಭಾರೀ ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ಮಧ್ಯರಾತ್ರಿಯ ನಂತರ ಕಾಲ್ತುಳಿತ ಸಂಭವಿಸಿದ್ದು, ಹಿರಿಯ ಅಧಿಕಾರಿಗಳು ಹಾಗೂ ದೇಗುಲ ಮಂಡಳಿ ಪ್ರತಿನಿಧಿಗಳು ಸ್ಥಳದಲ್ಲಿದ್ದಾರೆ. ಇನ್ನು ಈ ಕಾಲ್ತುಳಿತದಲ್ಲಿ ಮೃತದ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಕಾಲ್ತುಳಿತದಲ್ಲಿ ಗಾಯಗೊಂಡ ಜನರನ್ನ ಮಾತಾ ವೈಷ್ಣೋ ದೇವಿ ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಆಸ್ಪತ್ರೆಗಳಿಗೆ ಸೇರಿಸಲಾಗಿದೆ ಎಂದು ಆಸ್ಪತ್ರೆ ಮತ್ತು ಪೊಲೀಸ್ ಮೂಲಗಳು ತಿಳಿಸಿವೆ.
ಅಂದ್ಹಾಗೆ, ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನ ಅವಲೋಕಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನ ಘೋಷಿಸಿದ್ದಾರೆ. ಇನ್ನು ದುಃಖತಪ್ತ ಕುಟುಂಬಗಳಿಗೆ ತಮ್ಮ ಸಂತಾಪವನ್ನ ತಿಳಿಸಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.