ಜಮ್ಮು-ಕಾಶ್ಮೀರ

ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಮಹಿಳಾ ಸಿಆರ್ ಪಿಎಫ್ ತಂಡದಿಂದ ಮಹಿಳೆಯರ ತಪಾಸಣೆ

ಜಮ್ಮು ಕಾಶ್ಮೀರ : ಕಳೆದ 30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಮಹಿಳಾ ಸಿಆರ್ ಪಿಎಫ್ ತಂಡದಿಂದ ಮಹಿಳೆಯರ ತಪಾಸಣೆ ನಡೆಸಲಾಗುತ್ತಿದೆ.

ಇತ್ತೀಚೆಗೆ ಜಮ್ಮು ಕಾಶ್ಮೀರರದಲ್ಲಿ ಹೆಚ್ಚಾಗುತ್ತಿರುವ ಜನಸಾಮಾನ್ಯರ ಹತ್ಯೆ ಹಿನ್ನೆಲೆ ಸಿಆರ್ ಪಿಎಫ್ ಈ ಕ್ರಮಕ್ಕೆ ಮುಂದಾಗಿದ್ದು, ಜಮ್ಮುವಿನ ಲಾಲ್ ಚೌಕ್ ಪ್ರದೇಶದಲ್ಲಿ ಮಹಿಳೆಯರ ಬ್ಯಾಗ್ ಗಳನ್ನು ತಪಾಸಣೆ ನಡೆಸಲಾಗುತ್ತಿದೆ.

ಕಳೆದ ಎರಡು ದಿನಗಳಲ್ಲಿ ಉಗ್ರರು ಮೂರು ಕಡೆ ವಲಸೆ ಕಾರ್ಮಿಕರ ಮೇಲೆ ದಾಳಿ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಕಣಿವೆ ರಾಜ್ಯದಲ್ಲಿರುವ ಎಲ್ಲಾ ವಲಸೆ ಕಾರ್ಮಿಕರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.

ಈ ಕೂಡಲೇ ಎಲ್ಲಾ ವಲಸಿಗರನ್ನು ಹತ್ತಿರದ ಪೊಲೀಸರ ಅಥವಾ ಅರೆಸೇನಾ, ಸೇನಾಕೇಂದ್ರಗಳಿಗೆ ಸ್ಥಳಾಂತರ ಮಾಡಬೇಕಿದೆ ಎಂದು ಜಮ್ಮುವಿನ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

ಜಮ್ಮುವಿನಲ್ಲಿ ವಲಸೆ ಕಾರ್ಮಿಕರ ಮೇಲೆ ಸರಣಿ ದಾಳಿ ನಡೆಯುತ್ತಿದ್ದು, ಬಿಹಾರ, ಉತ್ತರ ಪ್ರದೇಶ ಮೂಲದ ಸುಮಾರು 11 ಜನರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಈ ನಾಗರಿಕರ ಹತ್ಯೆ ಬಳಿಕ ಭದ್ರತಾ ಪಡೆಗಳಿಂದ ನಡೆದ ಎನ್ ಕೌಂಟರ್ ಗಳಲ್ಲಿ 13 ಉಗ್ರರನ್ನು ಸದೆಬಡೆಯಲಾಗಿದೆ ಎಂದರು.

Sneha Gowda

Recent Posts

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

6 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

26 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

54 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

1 hour ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

2 hours ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

2 hours ago