News Karnataka Kannada
Friday, May 03 2024
ಜಮ್ಮು-ಕಾಶ್ಮೀರ

ಶ್ರೀನಗರದಲ್ಲಿ ಎನ್ಕೌಂಟರ್ ಓರ್ವ ಉಗ್ರನ ಹತ್ಯೆ

Indian Army
Photo Credit :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ.

ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಸ್ಥಳವನ್ನು ಸುತ್ತುವರೆದ ಭದ್ರತಾಪಡೆಗಳು ಎನ್ಕೌಂಟರ್ ನಡೆಸಲು ಆರಂಭಿಸಿದ್ದಾರೆ. ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಸೇನಾಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.

ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.ಇದರಂತೆ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದು, ಅಡಗಿ ಕುಳಿತಿರುವ ಮತ್ತೊಬ್ಬ ಉಗ್ರನಿಗಾಗಿ ಕಾರ್ಯಾಚರಣೆ ಮುಂದುವರೆದಿದೆ.

ಹತ್ಯೆಯಾಗಿರುವ ಉಗ್ರ ಈ ಹಿಂದೆ ಸಿಆರ್’ಪಿಎಫ್ ಯೋಧರ ಮೇಲೆ ನಡೆದಿದ್ದ ದಾಳಿಯಲ್ಲಿ ಭಾಗಿಯಾಗಿದ್ದ ಎಂದು ಜಮ್ಮು ಮತ್ತು ಕಾಶ್ಮೀರದ ಐಜಿಪಿಯವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು