News Karnataka Kannada
Thursday, May 02 2024
ಜಮ್ಮು-ಕಾಶ್ಮೀರ

ಶ್ರೀನಗರ: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಹತ್ಯೆ

Military
Photo Credit : IANS

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕಿಲ್ಬಾಲ್ ಪ್ರದೇಶದಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.

ಶೋಪಿಯಾನ್ ಜಿಲ್ಲೆಯ ಕಿಲ್ ಬಾಲ್ ನಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಉಗ್ರರು ಮತ್ತು ಸೇನೆಯ ಮಧ್ಯೆ ಗುಂಡಿನ ಚಕಮಕಿ ಮುಂದುವರೆದಿದೆ.  ಘಟನಾ ಸ್ಥಳಕ್ಕೆ ಹೆಚ್ಚಿನ ಯೋಧರು ಧಾವಿಸಿ ಇಡೀ ಪ್ರದೇಶ ಸುತ್ತುವರೆದು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಶ್ರೀನಗರದ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಎನ್‌ ಕೌಂಟರ್‌ ಗಳಲ್ಲಿ ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಉನ್ನತ ಕಮಾಂಡರ್ ಸಲೀಂ ಪರ್ರೆ ಸೇರಿದಂತೆ ಇಬ್ಬರು ಉಗ್ರರು ಕೊಲ್ಲಲ್ಪಟ್ಟರು.

ಡಿಸೆಂಬರ್ 31 ರಂದು ಶ್ರೀನಗರದಲ್ಲಿ ಮೂವರು ಜೈಶ್-ಎ-ಮೊಹಮ್ಮದ್ ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿದ್ದವು. ಡಿಸೆಂಬರ್ 30 ರಂದು ದಕ್ಷಿಣ ಕಾಶ್ಮೀರದಲ್ಲಿ ಎರಡು ಎನ್‌ ಕೌಂಟರ್‌ ಗಳಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಆರು ಉಗ್ರರನ್ನು ಕೊಲ್ಲಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು