ಶ್ರೀನಗರ: ಬಸ್‌ಗೆ ಬೆಂಕಿ ತಗುಲಿ ನಾಲ್ವರು ಸಾವು, 22 ಮಂದಿಗೆ ಗಾಯ

ಶ್ರೀನಗರ, ಮೇ.13: ಜಮ್ಮುವಿನ ವೈಷ್ಣೋದೇವಿ ಮಾರ್ಗವಾಗಿ ತೆರಳುತ್ತಿದ್ದ ಪ್ರಯಾಣಿಕರ ಬಸ್‌ಗೆ ಬೆಂಕಿ ತಗುಲಿ ನಾಲ್ವರು ಸಾವನ್ನಪ್ಪಿದ್ದು, 22 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.

ಕತ್ರಾದಿಂದ ಜಮ್ಮುವಿಗೆ ಹೊರಟಿದ್ದ ಬಸ್‌ಗೆ ಕತ್ರಾದಿಂದ 1.5 ಕಿಮೀ ದೂರದಲ್ಲಿರುವ ಖಾರ್ಮಲ್ ಬಳಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 22 ಮಂದಿ ಗಾಯಗೊಂಡಿದ್ದಾರೆ. ಪ್ರಾಥಮಿಕ ತನಿಖೆಯ ನಂತರ ಬೆಂಕಿಯ ಮೂಲ ಎಂಜಿನ್ ಎಂದು ತಿಳಿದುಬಂದಿದೆ. ಇದರಿಂದ ಬೆಂಕಿ ಇಡೀ ಬಸ್‌ಗೆ ವೇಗವಾಗಿ ವ್ಯಾಪಿಸಿ ದುರಂತ ಸಂಭವಿಸಿದೆ ಎಂದು ಜಮ್ಮು ಎಡಿಜಿಪಿ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯ ಡೆಪ್ಯುಟಿ ಕಮಿಷನರ್ ಬಬಿಲಾ ರಕ್ವಾಲ್, ಅತಿಯಾದ ಬಿಸಿಲಿಗೆ ಬಸ್‌ನ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ.

ಟ್ವೀಟ್‌ನಲ್ಲಿ, ಕೇಂದ್ರ ಸಚಿವ ಡಾ ಜಿತೇಂದ್ರ ಸಿಂಗ್ ಅವರ, “ಕತ್ರಾದಲ್ಲಿ ಬಸ್ ಅಪಘಾತದ ಮಾಹಿತಿ ಪಡೆದ ತಕ್ಷಣ, ಇದೀಗ ಡೆಪ್ಯೂಟಿ ಕಮಿಷನರ್, ರಿಯಾಸಿ (ಜೆ&ಕೆ), ಶ್ರೀಮತಿ ಬಬಿಲಾ ರಖ್ವಾಲ್ ಅವರೊಂದಿಗೆ ಮಾತನಾಡಿದ್ದಾರೆ. 2 ಸಾವುನೋವುಗಳು ವರದಿಯಾಗಿವೆ, ಗಾಯಗೊಂಡವರನ್ನು ನರೈನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಾಯಾಳುಗಳಿಗೆ ಆರ್ಥಿಕವಾಗಿ ಮತ್ತು ಇತರ ರೀತಿಯಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು” ಎಂದು ಬರೆದಿದ್ದಾರೆ.

ಘಟನೆಯ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಜಮ್ಮು ಮತ್ತು ಕಾಶ್ಮೀರ ಶೋಕ ವ್ಯಕ್ತಪಡಿಸಿದ್ದಾರೆ. “ಕತ್ರಾದಲ್ಲಿ ಸಂಭವಿಸಿದ ದುರಂತ ಬಸ್ ಘಟನೆಯಲ್ಲಿ ಜೀವಹಾನಿಯಿಂದ ತೀವ್ರ ನೋವಾಗಿದೆ. ನಾನು ದುಃಖಿತ ಕುಟುಂಬಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಮತ್ತು ಸಾವನ್ನಪ್ಪಿದವರಿಗೆ ಸಂತಾಪ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ” ಎಂದು LG, J&K ಕಚೇರಿ ಟ್ವೀಟ್ ಮಾಡಿದ್ದಾರೆ.

Gayathri SG

Recent Posts

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

4 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

7 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

30 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

52 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

57 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

1 hour ago