ಜಮ್ಮು-ಕಾಶ್ಮೀರ

ಶ್ರೀನಗರ: ಭದ್ರತಾ ಪಡೆ-ಉಗ್ರರ ನಡುವೆ ಗುಂಡಿನ ಚಕಮಕಿ,ಇಬ್ಬರು ಉಗ್ರರ ಹತ್ಯೆ

ಶ್ರೀನಗರ:  ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಗರದ ರೈನಾವಾರಿ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ರಹಸ್ಯ ಮಾಹಿತಿ ಬಂದಿದ್ದು, ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯ ವೇಳೆ ಇಬ್ಬರು ಉಗ್ರರು ಕೊಲ್ಲಲ್ಪಟ್ಟಿದ್ದು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಳ್ಳಲಾಗಿದೆ. ಇನ್ನೂ ಇವರ ಗುರುತನ್ನು ಪತ್ತೆ ಮಾಡಲಾಗುತ್ತಿದೆ ಎಂದು ಜೆ & ಕೆ ಪೊಲೀಸರು ಟ್ವೀಟ್ ಮಾಡಿದ್ದಾರೆ. ಈ ಇಬ್ಬರೂ ಉಗ್ರರು ಎಲ್‌ಇಟಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.

‘ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್‌ಇಟಿಯ ಹತ್ಯೆಗೀಡಾದ ಸ್ಥಳೀಯ ಉಗ್ರಗಾಮಿಗಳಲ್ಲಿ ಒಬ್ಬರು ಮಾಧ್ಯಮದ ಗುರುತಿನ ಚೀಟಿ (ಐಡಿ) ಹೊಂದಿದ್ದರು. ಇದು ಮಾಧ್ಯಮದ ದುರ್ಬಳಕೆಯ ಸ್ಪಷ್ಟ ಪ್ರಕರಣವನ್ನು ಸೂಚಿಸುತ್ತದೆ’ ಎಂದು ಐಜಿಪಿ ಹೇಳಿದರು.

Swathi MG

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

47 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

1 hour ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

2 hours ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago