News Karnataka Kannada
Tuesday, May 07 2024
ಜಮ್ಮು-ಕಾಶ್ಮೀರ

ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ

Indain Army
Photo Credit :

ಕುಲ್ಗಾಂ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಹಿಜ್ಬುಲ್ ಮುಜಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.

ಈ ವೇಳೆ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದ ಸೇನಾಪಡೆ ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.

ಕುಲ್ಗಾಂನ ಛಾವಲ್ಗಾಂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸೇನಾಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು.

ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಹತ್ಯೆಯಾದ ಉಗ್ರರಿಂದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಹಂದಿದೆ.

ಹತ್ಯೆಯಾದ ಉಗ್ರರನ್ನು ಹಿಜ್ಬುಲ್ ಮುಜಾಹಿದ್ದೀನ್’ನ ಜಿಲ್ಲಾ ಕಮಾಂಡರ್, ಹೆಚ್.ಎಂ.ಶಿರಾಜ್ ಮೊಲ್ವಿ ಹಾಗೂ ಯಾವರ್ ಭಟ್ ಎಂದು ಗುರ್ತಿಸಲಾಗಿದೆ.

2016ರಿಂದಲೂ ಉಗ್ರ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ಶಿರಾಜ್, ಯುವಕರನ್ನು ಉಗ್ರ ಸಂಘಟನೆಗಳಲ್ಲಿ ನೇಮಕ ಮಾಡುವುದು, ನಾಗರೀಕರ ಹತ್ಯೆಯಲ್ಲಿ ತೊಡಗಿದ್ದ. ಈತನ ಹತ್ಯೆಯಿಂದ ದೊಡ್ಡ ಯಶಸ್ಸು ದೊರೆತಂತಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು