ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಿಹಾರದ ನಾಲ್ವರು ಸಾವನ್ನಪ್ಪಿದ್ದಾರೆ.
ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪ್ರದೇಶದ ಗೌರಿಪೋರಾದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಆದರೆ ಗಂಭೀರವಾಗಿ ಗಾಯಗೊಂಡ ಮೂವರು ಪ್ರಯಾಣಿಕರು ಮಾರ್ಗಮಧ್ಯೆ ಸಾವನ್ನಪ್ಪಿದರೆ, ನಾಲ್ಕನೆಯವರು ಆಸ್ಪತ್ರೆಯಲ್ಲಿ ನಿಧನರಾದರು.
ಮೃತಪಟ್ಟ ನಾಲ್ವರು ಪ್ರಯಾಣಿಕರು ಬಿಹಾರ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ.