ಭಾನುವಾರ ಮಧ್ಯಾಹ್ನದಿಂದ ಪಹಲ್ಗಾಮ್ ಬೇಸ್ನಿಂದ ಯಾತ್ರೆಯನ್ನು ಪುನರಾರಂಭ ಮಾಡಲಾಗಿತ್ತು. ಹವಾಮಾನ ಪರಿಸ್ಥಿತಿ ಸೂಕ್ತವಾಗಿದ್ದ ಹಿನ್ನೆಲೆ 6491 ಮಂದಿ ಯಾತ್ರಾರ್ಥಿಗಳು ಪವಿತ್ರ ಗುಹೆಯ ದರ್ಶನ ಪಡೆದರು. ಈಗ ಬಾಲ್ಟಾಲ್ ಭಾಗದಲ್ಲೂ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ. 116 ಸಾಧುಗಳು, 6 ಸಾದ್ವಿಗಳು ಸೇರಿ ಈವರೆಗೂ 93,929 ಯಾತ್ರಾರ್ಥಿಗಳು ಪವಿತ್ರ ಗುಹೆಯ ದರ್ಶನ ಪಡೆದಿದ್ದಾರೆಂದು ಮಾಹಿತಿ ನೀಡಿದ್ದಾರೆ. ಈ ನಡುವೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು, ಅಮರನಾಥ ಯಾತ್ರಾ ಆಡಳಿತ ಮಂಡಳಿಯ ಜೊತೆಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮತ್ತು ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಚರ್ಚಿಸಿದ್ದಾರೆಂದು ತಿಳಿದುಬಂದಿದೆ.
ಅಮರನಾಥ ಯಾತ್ರೆ ಪುನರಾರಂಭ: ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಹೆಲಿಕಾಪ್ಟರ್ ಸೇವೆ
Photo Credit :
Twitter
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆಯ ಪ್ರಮಾಣ ತಗ್ಗಿ, ಹವಾಮಾನ ಪರಿಸ್ಥಿತಿ ಸುಧಾರಿಸಿದ್ದು ಈ ಹಿನ್ನೆಲೆಯಲ್ಲಿ ಪಹಲ್ಗಾಮ್ ಮಾರ್ಗದಲ್ಲಿ ಬಾಲ್ಟಾಲ್ ಬೇಸ್ನಿಂದ ಮತ್ತೆ ಅಮರನಾಥ ಯಾತ್ರೆ ಪುನರಾರಂಭಗೊಂಡಿದೆ. ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಹೆಲಿಕಾಪ್ಟರ್ ಸೇವೆಯನ್ನು ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.