ಜಮ್ಮು-ಕಾಶ್ಮೀರ

ಅನಂತ್‌ನಾಗ್ ನಲ್ಲಿ ಮುಂದುವರೆದ ಗುಂಡಿನ ಚಕಮಕಿ: ಮತ್ತೊಬ್ಬ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಗುಂಡಿನ ಕಾಳಗ ಮೂರನೇ ದಿನವೂ ಮುಂದುವರಿದಿದ್ದು, ಇಂದು ಭಾರತೀಯ ಸೇನೆಯ ಮ‌ತ್ತೊಬ್ಬ ಯೋಧ ಹುತಾತ್ಮರಾಗಿದ್ದಾರೆ.

ಸೆ.13 ರಂದು ನಡೆದ ಗುಂಡಿನ ಚಕಮಕಿಯ ವೇಳೆ ಕಾಣೆಯಾಗಿದ್ದ ಸೈನಿಕ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅನಂತನಾಗ್ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ಜಂಟಿ ಭದ್ರತಾ ಕಾರ್ಯಾಚರಣೆಯ ಸಂದರ್ಭದಲ್ಲಿ ನಿನ್ನೆ (ಸೆ.14) ಯೋಧ ನಾಪತ್ತೆಯಾಗಿದ್ದರು. ‌

ಬುಧವಾರ ಭದ್ರತಾ ಪಡೆ ಸಿಬ್ಬಂದಿ ಮತ್ತು ಉಗ್ರರ ನಡುವೆ ನಡೆದ ಎರಡು ಪ್ರತ್ಯೇಕ ಗುಂಡಿನ ಕಾಳಗಗಳಲ್ಲಿ ಸೇನಾ ಕರ್ನಲ್‌, ಮೇಜರ್‌, ಪೊಲೀಸ್‌ ಅಧಿಕಾರಿ, ಪೊಲೀಸ್‌ ವಿಶೇಷಾಧಿಕಾರಿ ಮತ್ತೊಬ್ಬ ಯೋಧ ಹುತಾತ್ಮರಾಗಿದ್ದರು.

ಸೈನಿಕರು ಡ್ರೋನ್‌ಗಳನ್ನು ಬಳಸಿ ಶಂಕಿತ ಭಯೋತ್ಪಾದಕರ ಅಡಗುತಾಣದ ಸ್ಥಳಗಳ ಮೇಲೆ ಗ್ರೆನೇಡ್‌ ದಾಳಿ ನಡೆಸುತ್ತಾರೆ. ಈ ಪ್ರದೇಶದಲ್ಲಿ ಅಡಗಿರುವ ಭಯೋತ್ಪಾದಕರ ಗುಂಪನ್ನು ಗುರಿಯಾಗಿಸಲು ಸೈನಿಕರು ಗ್ರೆನೇಡ್ ಲಾಂಚರ್‌ಗಳನ್ನು ಸಹ ಬಳಸುತ್ತಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

26 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

44 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

1 hour ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago