ಪೂಂಛ್​ನ ದೇವಸ್ಥಾನದ ಬಳಿಯ ಬಸ್​ ನಿಲ್ದಾಣದಲ್ಲಿ ಸ್ಫೋಟ

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪೂಂಛ್​ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸ್ಫೋಟ ಸಂಭವಿಸಿದೆ. ಪೂಂಛ್​ನ ದೇವಸ್ಥಾನವೊಂದರ ಸಮೀಪ ಸುರನ್‌ಕೋಟೆ ಬಸ್‌ ನಿಲ್ದಾಣದ ಬಳಿ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ.

ಸ್ಫೋಟದ ನಂತರ, ಬಸ್ ನಿಲ್ದಾಣದ ಸಮೀಪವಿರುವ ದೇವಾಲಯದ ಗೋಡೆಗಳ ಮೇಲೆ ಚೂರುಗಳು ಕಂಡುಬಂದಿವೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಫೋರೆನ್ಸಿಕ್ ತಂಡವನ್ನು ಕರೆಸಲಾಗಿದೆ ಮತ್ತು ಸ್ಫೋಟದ ಸ್ಥಳದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇನ್ನು ಈ ಸ್ಫೋಟದ ಹಿಂದೆ ಯಾರ ಕೈವಾಡವಿದೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ, ಇದು ಬಹುಶಃ ಗ್ರೆನೇಡ್ ದಾಳಿಯಾಗಿರಬಹುದು ಎಂದು ಮೂಲಗಳು ತಿಳಿಸಿವೆ.

ಭದ್ರತಾ ಏಜೆನ್ಸಿಗಳು ತನಿಖೆ ಆರಂಭಿಸಿವೆ. ಸ್ಫೋಟ ಸಂಭವಿಸಿದ ಪ್ರದೇಶದ ಸಲೈನ್ ಗ್ರಾಮದಲ್ಲಿ ಮೂವರನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಪಿಸ್ತೂಲ್‌ಗಳು, ನಾಲ್ಕು ಮ್ಯಾಗಜೀನ್‌ಗಳು, ಆರು ಮೊಬೈಲ್ ಫೋನ್‌ಗಳು ಮತ್ತು 2.5 ಲಕ್ಷ ರೂಪಾಯಿ ಮೌಲ್ಯದ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago