ಜಮ್ಮು ಮತ್ತು ಕಾಶ್ಮೀರದಲ್ಲೀಗ ಎಲೆಕ್ಟ್ರಿಕ್ ಬಸ್‍ ಗಳ ಹವಾ

ಜಮ್ಮು ಮತ್ತು ಕಾಶ್ಮೀರ: ಈಗ ಎಲೆಕ್ಟ್ರಿಕ್ ಬಸ್ ಗಳ ಜಮಾನ ಶುರುವಾಗಿದ್ದು ಎಲ್ಲೆಡೆ ಎಲೆಕ್ಟ್ರಿಕಲ್ ಬಸ್ ಗಳತ್ತ ಚಿತ್ತ ಹರಿಯಲಾರಂಭಿಸಿದೆ. ಇದೀಗ ಜಮ್ಮು ಮತ್ತು ಕಾಶ್ಮೀರದಲ್ಲಿ ಎಲೆಕ್ಟ್ರಿಕ್ ಬಸ್ ಗಳು ಸವಾರಿ ಆರಂಭಿಸಿದ್ದು ಎಲ್ಲರ ಗಮನಸೆಳೆದಿದೆ.

ಜಮ್ಮುಗೆ ಎಲೆಕ್ಟ್ರಿಕ್ ಬಸ್ ಗಳನ್ನು ವಾಣಿಜ್ಯ ವಾಹನಗಳ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ಗ್ರೂಪ್ ನ ಅಂಗಸಂಸ್ಥೆಯಾಗಿರುವ ಟಿಎಂಎಲ್ ಸ್ಮಾರ್ಟ್ ಸಿಟಿ ಮೊಬಿಲಿಟಿ ಸಲೂಶನ್ಸ್ (ಜೆ ಅಂಡ್ ಕೆ) ಪ್ರೈವೇಟ್ ಲಿಮಿಟೆಡ್ ತಯಾರಿಸಿದೆ.

ಜಮ್ಮು ಸ್ಮಾರ್ಟ್ ಸಿಟಿ ಲಿಮಿಟೆಡ್ ಗೆ ಅಲ್ಟ್ರಾ ಇವಿ ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್ ಗಳನ್ನು ಸಂಸ್ಥೆ ಪೂರೈಕೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಉಪಕ್ರಮದಡಿ ಈ ಬಸ್ ಗಳನ್ನು ಪೂರೈಸಲಾಗಿದೆ. ಜಮ್ಮು ನಗರದಲ್ಲಿ ಪರಿಸರಸ್ನೇಹಿ ಸುಸ್ಥಿರ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಈ ವಿದ್ಯುತ್ ಚಾಲಿತ ಬಸ್ ಗಳ ಸಂಚಾರ ಆರಂಭಿಸಲಾಗಿದೆ.

ಕಟ್ಟಿಂಗ್ ಎಡ್ಜ್ ತಂತ್ರಜ್ಞಾನಗಳನ್ನು ಬಳಸಿಕೊಂಡು ಈ ಎಲೆಕ್ಟ್ರಿಕ್ ಬಸ್ ಗಳನ್ನು ಭಾರತದಲ್ಲಿಯೇ ತಯಾರಿಸಲಾಗಿದೆ. ಸುಧಾರಿತ ಸೌಲಭ್ಯಗಳು ಮತ್ತು ಎಲೆಕ್ಟ್ರಿಕ್ ಪವರ್ ಸಿಸ್ಟಂಗಳನ್ನು ಬಸ್ ಗಳು ಒಳಗೊಂಡಿರುವುದು ವಿಶೇಷವಾಗಿದೆ. ಇದೀಗ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಮತ್ತು ವಾಯು ಮಾಲಿನ್ಯದಿಂದ ದೂರವಿಡುವ ಸಲುವಾಗಿ ಎಲೆಕ್ಟ್ರಿಕ್ ಬಸ್ ಗಳಿಗೆ ಆದ್ಯತೆ ನೀಡಲಾಗುತ್ತಿದೆ.

ಜಮ್ಮು ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಸಿಇಒ ರಾಹುಲ್ ಯಾದವ್ (ಐಎಎಸ್) ಅವರು ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಿಸುವ ಮೂಲಕ ಜಮ್ಮುವಿನಲ್ಲಿ ಸಾರಿಗೆ ವ್ಯವಸ್ಥೆಯನ್ನು ಸುಧಾರಣೆ ಮಾಡಲು ಜಮ್ಮು ಸ್ಮಾರ್ಟ್ ಸಿಟಿ ಲಿಮಿಟೆಡ್ ಬದ್ಧವಾಗಿದೆ. ಪ್ರಯಾಣಿಕರಿಗೆ ಹೆಚ್ಚು ಸೌಲಭ್ಯಗಳುಳ್ಳ ಮತ್ತು ಅನುಕೂಲಕರವಾದ ಸುರಕ್ಷಿತ ಮತ್ತು ಸುಸ್ಥಿರತೆ ಮಟ್ಟವನ್ನು ಹೆಚ್ಚಿಸುವ ಮೂಲಕ ಸಾರ್ವಜನಿಕ ಸಾರಿಗೆಯನ್ನು ಇನ್ನಷ್ಟು ಉತ್ತಮಪಡಿಸುವ ಗುರಿ ನಮ್ಮದಾಗಿದೆ ಎಂದು ಹೇಳಿದ್ದಾರೆ.

ಟಾಟಾ ಮೋಟರ್ಸ್ ಇದುವರೆಗೆ ದೇಶದ ವಿವಿಧ ನಗರಗಳಿಗೆ 1,500 ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್ ಗಳನ್ನು ಪೂರೈಸಿರುವುದು ವಿಶೇಷವಾಗಿದೆ.

 

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago