News Karnataka Kannada
Tuesday, May 07 2024
ಜಮ್ಮು-ಕಾಶ್ಮೀರ

ಜಮ್ಮುಕಾಶ್ಮೀರದಲ್ಲಿ ಗುಂಡಿನ ದಾಳಿ : ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದು, ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿರುವ ಘಟನೆ ನಡೆದಿದೆ.
Photo Credit : NewsKarnataka

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದು, ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಉತ್ತರ ಕಾಶ್ಮೀರದ ಸೋಪೋರ್ ಪ್ರದೇಶದ ಚೆಕ್ ಮೊಹಲ್ಲಾ ನೌಪೋರಾದಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಪ್ರಾರಂಭಗೊಂಡು, ಶುಕ್ರವಾರ ಮುಂಜಾನೆಯೂ ಗುಂಡಿನ ದಾಳಿ ಮುಂದುವರೆದಿದೆ. ಇದುವರೆಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಇಬ್ಬರು ಸೇನಾ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಸಮೀಪದ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ. ಎನ್‌ಕೌಂಟರ್ ನಡೆದ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು