ಜಮ್ಮು, ಜು.12: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐದು ಅಮರನಾಥ ಯಾತ್ರಿಕರು ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶಕ್ಕೆ ಸೇರಿದ ಐವರು ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಕಾರು ಜಿಲ್ಲೆಯ ಸಂರೋಲಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
”ಗಾಯಗೊಂಡ ಯಾತ್ರಾರ್ಥಿಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅವರು ಬಾಲ್ಟಾಲ್ ಬೇಸ್ ಕ್ಯಾಂಪ್ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.